ADVERTISEMENT

23 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ: 'ಯೆಲ್ಲೊ ಅಲರ್ಟ್' ಘೋಷಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:46 IST
Last Updated 5 ಸೆಪ್ಟೆಂಬರ್ 2020, 17:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.6ರಿಂದ 8ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ,ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡೂ ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಜಯಪುರದಲ್ಲಿ 6 ಸೆಂ.ಮೀ ಮಳೆಯಾಗಿದೆ. ಹಾಸನ 5, ಹೊಸನಗರ, ಚಾಮರಾಜನಗರ 4, ತಿಪಟೂರು, ಕೊಪ್ಪ 3, ಕಾರವಾರ, ಚಿಕ್ಕಮಗಳೂರು, ಶಿಕಾರಿಪುರ, ಭಾಗಮಂಡಲ 2, ಬೆಳ್ತಂಗಡಿ, ಸುಳ್ಯ, ಧಾರವಾಡ, ಹಿರೇಕೆರೂರು, ಸಕಲೇಶಪುರ, ಬೇಲೂರು, ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ನಂಜನಗೂಡಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.