ADVERTISEMENT

ಮಳೆ: ಸಿಡಿಲು ಬಡಿದು ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2021, 19:31 IST
Last Updated 11 ಮೇ 2021, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಂಗಳ
ವಾರ ಉತ್ತಮ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಕಕ್ಕೇರಾದಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮುಡಿಪು, ಪುತ್ತೂರು ವಿವಿಧೆಡೆ ಉತ್ತಮ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಧಾರಾಕಾರ ಮಳೆಯಾಗಿದ್ದು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಿದೆ.

ಯಾದಗಿರಿ ಜಿಲ್ಲೆ ಕೆಂಭಾವಿ, ಹುಣಸಗಿ, ಕಲಬುರ್ಗಿ ಜಿಲ್ಲೆಯ ವಾಡಿಯಲ್ಲಿ ಗಾಳಿಗೆ ಮನೆಗಳ ಹೆಂಚು ಹಾರಿವೆ. ಕೊಪ್ಪಳ ಜಿಲ್ಲೆ ಹನಮಸಾಗರದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಹಾಗೂ ಸುತ್ತಮುತ್ತ ಬಾಳೆ, ಮಾವು, ನುಗ್ಗೆ ಗಿಡಗಳು ನೆಲಕ್ಕುರುಳಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಪಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.