ADVERTISEMENT

Karnataka Rains: ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 23:31 IST
Last Updated 1 ಡಿಸೆಂಬರ್ 2025, 23:31 IST
   

ಬೆಂಗಳೂರು: ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಂಗಳವಾರ (ಡಿ.2) ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‘ಬಳ್ಳಾರಿ, ಬೆಂಗಳೂರು ಗ್ರಾಮೀಣ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ಒಣ ಹವಾಮಾನ ಇರಲಿದೆ’ ಎಂದು ಭಾರತೀಯ ಹವಾಮಾನ ಕೇಂದ್ರದ ಬೆಂಗಳೂರು ಮುಖ್ಯಸ್ಥ ಎನ್‌.ಪುವಿಯರಸನ್‌ ತಿಳಿಸಿದ್ದಾರೆ.

ಬುಧವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮೀಣ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ADVERTISEMENT

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗಿನ ಜಾವ ಹೆಚ್ಚಿನ ಪ್ರಮಾಣದಲ್ಲಿ ಮಂಜು ಬೀಳಲಿದೆ. ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ‌ ಎಂದು ಕೇಂದ್ರದ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.