ADVERTISEMENT

‘ಪರ್ಯಾಯ ರಾಜಕಾರಣದತ್ತ ರೈತ ಸಂಘ ಚಿತ್ತ’: ಕೋಡಿಹಳ್ಳಿ ಚಂದ್ರಶೇಖರ

ಮೂರು ಕೃಷಿ ಕಾಯ್ದೆಗಳ ಹಿಂಪಡೆಯಲು ಕೋಡಿಹಳ್ಳಿ ಚಂದ್ರಶೇಖರ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 20:34 IST
Last Updated 11 ಮಾರ್ಚ್ 2022, 20:34 IST
   

ಬಾಗಲಕೋಟೆ:‘ರಾಜ್ಯದಲ್ಲಿ ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎಂದು ನಾವು ಭಾವಿಸಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯ ರೈತ ಸಂಘ ಕೂಡ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಶಕ್ತಿಯ ಜೊತೆಗೆ ಈ ನಾಡಿನ ಯುವಕರು, ನಾಗರಿಕರ ಶಕ್ತಿ ಒಗ್ಗೂಡಬೇಕು ಎಂಬ ನಿಟ್ಟಿನಲ್ಲಿ ಸಂಘಟನೆ ಕೆಲಸ ಮಾಡಲಿದೆ ಎಂದರು.

ಭ್ರಷ್ಟಾಚಾರದ ಬಗ್ಗೆ ನೈತಿಕತೆ ಇಟ್ಟುಕೊಂಡು ಮಾತಾಡುವ ಸ್ಥಿತಿಯಲ್ಲಿ ಯಾರಾದರೂ ನಾಯಕರು ಇದ್ದಾರೆಯೇ ಎಂದು ಪ್ರಶ್ನಿಸಿದ ಕೋಡಿಹಳ್ಳಿ ಚಂದ್ರಶೇಖರ, ಪರ್ಯಾಯ ರಾಜಕಾರಣದ ಬಗ್ಗೆ ಆಮ್‌ ಆದ್ಮಿ ಪಕ್ಷದೊಂದಿಗೆ ಸೇರುವ ಬಗ್ಗೆ ಇನ್ನೂ ಚರ್ಚೆ ನಡೆಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

‘ರಾಜ್ಯದಲ್ಲಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳ ಜಾರಿಗೆ ಆಗಿನ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡರು. ಆದರೆ ವಿಧಾನಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ ಸಿಗದೇ ಇದ್ದಾಗ ಜೆಡಿಎಸ್ ನಾಯಕ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದ್ದರು. ಹೀಗಾಗಿ ಎಲ್ಲರೂ ರೈತರ ವಿರೋಧಿಗಳು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.