ADVERTISEMENT

ಕೇಂದ್ರದ ಕೃಷಿ ಕಾಯ್ದೆಗಳಿಗೆ ವಿರೋಧ; ಭಾರತ್‌ ಬಂದ್‌ಗೆ ರಾಜ್ಯ ರೈತ ಸಂಘ ಬೆಂಬಲ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 22:11 IST
Last Updated 22 ಸೆಪ್ಟೆಂಬರ್ 2021, 22:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇದೇ 27ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ನೀಡುವುದಾಗಿರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಸ್ವಾಮಿನಾಥನ್ ವರದಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು.ಆದರೆ, ಪ್ರಧಾನಿಯಾದ ನಂತರ ರೈತರನ್ನು ಮರೆತಿದ್ದಾರೆ. ಮುಂದಿನ ಚುನಾವಣೆಯಲ್ಲಿ ರೈತರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷವಿ.ಆರ್. ನಾರಾಯಣರೆಡ್ಡಿ ಬುಧವಾರಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ಎಪಿಎಂಸಿಗಳು ಮುಚ್ಚುತ್ತಿವೆ. ಕಾರ್ಪೊರೇಟ್‌ ಕಂಪನಿಗಳ ಹಿತಾಸಕ್ತಿ ಕಾಪಾಡಲು ಮಾತ್ರ ಸರ್ಕಾರ ಗಮನಹರಿಸುತ್ತಿದೆ. ಭೂಮಿಯನ್ನು ಖಾಸಗಿ ಕಂಪನಿಗಳಿಗೆ ನೀಡುವ ಮೂಲಕ ರೈತರನ್ನು ಬೀದಿ ಪಾಲು ಮಾಡಲಾಗುತ್ತಿದೆ ಎಂದು ಅವರು ದೂರಿದರು.

ADVERTISEMENT

ಮುಖ್ಯಮಂತ್ರಿ ಹೇಳಿಕೆಗೆ ಆಕ್ಷೇಪ
ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವವರು ರೈತರಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಹೇಳಿಕೆಯನ್ನು ನಾರಾಯಣರೆಡ್ಡಿ ಖಂಡಿಸಿದರು.

ವಿದೇಶಿ ಸಂಸ್ಥೆಗಳು ರೈತರಿಗೆ ಹಣ ನೀಡುತ್ತಿವೆ ಎನ್ನುವಆರೋಪ ಮಾಡಲಾಗುತ್ತಿದೆ. ಸರ್ಕಾರ ಇಂತಹ ಆರೋಪ ಮಾಡುವ ಬದಲುರೈತರ ಬ್ಯಾಂಕ್‌ಖಾತೆಗಳನ್ನು ಪರಿಶೀಲಿಸಲಿ ಎಂದು ಒತ್ತಾಯಿಸಿದರು.

ಇದೇ 23ರಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿರೈತ ಸಂಘಟನೆಗಳು ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ನಮ್ಮ ಸಂಘಟನೆಯೂ ಭಾಗವಹಿಸಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.