ADVERTISEMENT

ಸಿರಿಧಾನ್ಯ ಉತ್ತೇಜಿಸಲು ರೈತಸಿರಿ ಯೋಜನೆ: ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 6:47 IST
Last Updated 27 ಆಗಸ್ಟ್ 2022, 6:47 IST
ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ    

ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ‌ ತಿಂಗಳು‌‌ ಬೆಂಗಳೂರಿನಲ್ಲಿಯೂ ಸಿರಿಧಾನ್ಯ ಮೇಳ ಆಯೋಜಿಸಲಾಗವುದು ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಮಳೆಯಿಂದ ಆಗಿರುವ ಬೆಳೆಹಾನಿ ಬಗ್ಗೆ ಜಂಟಿ‌ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ವರದಿ ಪಡೆದು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.