ADVERTISEMENT

ರಾಯಣ್ಣ ಪ್ರತಿಮೆ ವಿವಾದ: ಇತ್ಯರ್ಥಕ್ಕೆ ಸಿ.ಎಂ ಗೆ ಮನವಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 21:48 IST
Last Updated 26 ಆಗಸ್ಟ್ 2020, 21:48 IST
ಕನಕಗುರುಪೀಠದ ನಿರಂಜನಾನಂದ ಸ್ವಾಮೀಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಂಬಳಿ ಹೊದಿಸಿ, ತಿಲಕವಿಟ್ಟರು
ಕನಕಗುರುಪೀಠದ ನಿರಂಜನಾನಂದ ಸ್ವಾಮೀಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಂಬಳಿ ಹೊದಿಸಿ, ತಿಲಕವಿಟ್ಟರು   

ಬೆಂಗಳೂರು: ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆಯ ಪ್ರತಿಷ್ಠಾಪನೆ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸುವಂತೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.

ಬುಧವಾರ ಸಂಜೆ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಅರ್ಪಿಸಿದರು. ಸಮಸ್ಯೆಯನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

‘ವಿವಾದವನ್ನು ಬಗೆಹರಿಸಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಅದಕ್ಕಿರುವ ಕಾನೂನಿನ ತೊಡಕುಗಳನ್ನು ನಿವಾರಿಸಲಾಗುವುದು. ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ದಿಸೆಯಲ್ಲಿ ಕಾರ್ಯ ಪ್ರವೃತ್ತರಾಗಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

‘ಸರ್ಕಾರಕ್ಕೆ ಸಂಗೊಳ್ಳಿ ರಾಯಣ್ಣನ ಬಗ್ಗೆ ಸಂಪೂರ್ಣ ಗೌರವವಿದೆ. ಪ್ರತಿಮೆ ಸ್ಥಾಪನೆಯ ಬಗ್ಗೆ ಎರಡು ಮಾತಿಲ್ಲ. ನಾಳೆ ನಡೆಯುವ ಪ್ರತಿಭಟನೆಯೂ ಶಾಂತಿಯುತವಾಗಿರಲಿ’ ಎಂದು ಮನವಿ ಮಾಡಿದರು.

ಆಗಸ್ಟ್‌ 14 ರಂದು ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲಾಗಿತ್ತು. ಅದನ್ನು ಸ್ಥಳೀಯ ಆಡಳಿತ ತೆರವುಗೊಳಿಸಿತ್ತು. ಅದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಾ ಬಂದಿವೆ. ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಶಾಂತಿಯುತವಾಗಿ ನಡೆಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.