
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ರಾಜಭವನಗಳ ಹೆಸರನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡಲಾಗಿದ್ದು, ಕರ್ನಾಟಕದ ರಾಜಭವನವನ್ನು ಕೂಡಾ ‘ಲೋಕಭವನ’ಎಂದು ಮರು ನಾಮಕರಣಗೊಳಿಸಲಾಗಿದೆ
ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬುಧವಾರ ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್, ‘ಹೆಸರು ಬದಲಾವಣೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಅನುಮೋದನೆ ನೀಡಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ’ ಎಂದು ತಿಳಿಸಿದ್ದಾರೆ.
‘ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್‌ಸೈಟ್‌ಗಳು ಹಾಗೂ ಫಲಕಗಳಲ್ಲಿ ‘ರಾಜಭವನ ಕರ್ನಾಟಕ’ ಬದಲು ‘ಲೋಕಭವನ ಕರ್ನಾಟಕ’ ಎಂದು ಬಳಸಬೇಕು’ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.