ಸಹಕಾರ ಸಚಿವ ಕೆ.ಎನ್. ರಾಜಣ್ಣ
-ಪ್ರಜಾವಾಣಿ ಚಿತ್ರ
ಬೆಂಗಳೂರು: ‘ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಆಗಲಿದೆ ಎಂದು ಈ ಹಿಂದೆ ನೀಡಿದ್ದ ಹೇಳಿಕೆಗೆ ನಾನು ಈಗಲೂ ಬದ್ಧ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪೂರ್ವನಿಗದಿತ ಕಾರ್ಯಕ್ರಮದ ಕಾರಣ ನಾನು ಕುಟುಂಬ ಸಮೇತ ವಿದೇಶಕ್ಕೆ ಹೋಗಿದ್ದೆ. ಹೀಗಾಗಿ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ’ ಎಂದರು.
‘ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಬೇಕೆಂದು ಇದ್ದೇನೆ. ಅವರ ಜೊತೆ ಕೆಲವು ವಿಚಾರಗಳನ್ನು ಮಾತನಾಡಬೇಕಿದೆ’ ಎಂದರು.
‘ಸುರ್ಜೇವಾಲಾ ಅವರನ್ನು ಸಚಿವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿಮ್ಮನ್ನೂ ಆಹ್ವಾನಿಸಿರಲಿಲ್ಲವೇ’ ಎಂಬ ಪ್ರಶ್ನೆಗೆ, ‘ನನ್ನನ್ನು ಕರೆದಿರಲಿಲ್ಲ. ಇಲ್ಲೇ ಇರುತ್ತಿದ್ದರೆ ಭೇಟಿ ಮಾಡುತ್ತಿದ್ದೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.