ADVERTISEMENT

ಆರೋಗ್ಯ ವಿವಿ ವಿದ್ಯಾರ್ಥಿಗಳಿಗೆ ವಿಮಾ ರಕ್ಷೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 20:00 IST
Last Updated 3 ಜುಲೈ 2019, 20:00 IST

ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ವಿಮಾ ಸುರಕ್ಷೆ ಒದಗಿಸುವ ವಿನೂತನ ಯೋಜನೆ ಆರಂಭವಾಗಲಿದೆ.

ರಾಜ್ಯದ ವಿಶ್ವವಿದ್ಯಾಲಯವೊಂದು ಇದೇ ಪ್ರಥಮ ಬಾರಿಗೆ ಇಂತಹ ಯೋಜನೆ ಜಾರಿಗೆ ತರುತ್ತಿದ್ದು, ವಿದ್ಯಾರ್ಥಿಗಳ ಪೋಷಕರು ಅಕಾಲಿಕವಾಗಿ ನಿಧನರಾದರೆ ಕೋರ್ಸ್‌ ಪೂರ್ಣಗೊಳಿಸುವುದಕ್ಕೆ ಇದು ನೆರವಿಗೆ ಬರಲಿದೆ. ಮಂಗಳೂರಿನಲ್ಲಿ ಈಚೆಗೆ ನಡೆದ ಸಿಂಡಿಕೇಟ್‌ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಇದನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

‘ಈ ವಿಮಾ ಯೋಜನೆ ಆರಂಭಿಸುವ ಕುರಿತಂತೆ ವಿಚಾರ ನಡೆಸಲಾಗುತ್ತಿದೆ. ಶೀಘ್ರವೇ ಅದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ವೈದ್ಯಕೀಯ, ದಂತ ವೈದ್ಯಕೀಯ, ನರ್ಸಿಂಗ್‌ ಮತ್ತು ಅರೆ ವೈದ್ಯಕೀಯ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆಲ್ಲಾ ನೆರವಿಗೆ ಬರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ’ ಎಂದು ಕುಲಪತಿ ಡಾ.ಸಚ್ಚಿದಾನಂದ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.