ಬೆಂಗಳೂರು: ನಟ ಅಂಬರೀಷ್ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ತನ್ನ ಗೆಳೆಯನ ಸಾವಿಗೆ ಕಂಬನಿ ಮಿಡಿದಿದ್ದಾರೆ.
‘ಅದ್ಭುತ ವ್ಯಕ್ತಿ, ಆಪ್ತ ಸ್ನೇಹಿತ...ಈ ದಿನ ನಿನ್ನನ್ನು ನಾನು ಕಳೆದುಕೊಂಡೆ...’ ಎಂದು ನಟ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.
ಸ್ವೀಡನ್‌ನಲ್ಲಿ ಚಿತ್ರೀಕರಣದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸುದ್ದಿ ತಿಳಿದ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಶೀಘ್ರವೇ ಬೆಂಗಳೂರಿಗೆ ವಾಪಸಾಗುತ್ತಿರುವುದಾಗಿ ದರ್ಶನ್ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಓದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.