ADVERTISEMENT

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್

​ಪ್ರಜಾವಾಣಿ ವಾರ್ತೆ
Published 30 ಮೇ 2022, 7:33 IST
Last Updated 30 ಮೇ 2022, 7:33 IST
ಬಿ ಫಾರ್ಮ್ ಪಡೆಯುತ್ತಿರುವ ಮನ್ಸೂರ್ ಅಲಿ ಖಾನ್
ಬಿ ಫಾರ್ಮ್ ಪಡೆಯುತ್ತಿರುವ ಮನ್ಸೂರ್ ಅಲಿ ಖಾನ್   

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯನ್ನಾಗಿ ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್‌ ಅವರ ಮಗ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಎಐಸಿಸಿ ಭಾನುವಾರ ಪ್ರಕಟಿಸಿದ ಪಟ್ಟಿಯಲ್ಲಿ ರಾಜ್ಯದಿಂದ ಜೈರಾಂ ರಮೇಶ್ ಅವರನ್ನು ಮಾತ್ರ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು. ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್ ನಾಯಕರು, ಮನ್ಸೂರ್ ಅವರಿಗೂ ಸೋಮವಾರ 'ಬಿ' ಫಾರ್ಮ್ ವಿತರಿಸಿದರು. ಜೈರಾಂ ರಮೇಶ್ ಕೂಡ ಇದೇ ಸಂದರ್ಭದಲ್ಲಿ ಪಕ್ಷದ 'ಬಿ' ಫಾರ್ಮ್ ಸ್ವೀಕರಿಸಿದರು.

ಬಿಜೆಪಿಯಿಂದ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಚಿತ್ರನಟ ಜಗ್ಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಜೆಡಿಎಸ್ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.