ADVERTISEMENT

ವರಿಷ್ಠರ ಆಯ್ಕೆಗೆ ಬಿಎಸ್‌ವೈ ಸಹಮತ: ಈರಣ್ಣ, ಗಸ್ತಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 19:06 IST
Last Updated 9 ಜೂನ್ 2020, 19:06 IST
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಅಶೋಕ್‌ ಗಸ್ತಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಇದ್ದಾರೆ –ಪ್ರಜಾವಾಣಿ ಚಿತ್ರ
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಅಶೋಕ್‌ ಗಸ್ತಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.

ಇದಕ್ಕೆ ಮುನ್ನ ಇಬ್ಬರೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಹಾಜರಿದ್ದರು. ಅಲ್ಲದೆ, ಹಿರಿಯ ಶಾಸಕ ಉಮೇಶ ಕತ್ತಿ ಮತ್ತು ರಾಜ್ಯಸಭೆ ಟಿಕೆಟ್‌ ಆಕಾಂಕ್ಷಿ ರಮೇಶ ಕತ್ತಿಯವರೂ ಇದ್ದರು.

ADVERTISEMENT

ಕಾರ್ಯಕರ್ತರಿಗೆ ಅವಕಾಶ: ‘ಪಕ್ಷ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿದೆ. ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದ ಕಾರಣಕ್ಕೆ ನೀಡಿದ ಕೊಡುಗೆ. ಇಂಥದ್ದು ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ. ಇದಕ್ಕಾಗಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಗೃಹ ಸಚಿವ ಅಮಿತ್ ‌ಶಾ ಅವರನ್ನು ಅಭಿನಂದಿಸುತ್ತೇನೆ. ರಾಜ್ಯಸಭೆಯಲ್ಲಿ ಉತ್ತಮವಾಗಿಕೆಲಸ ಮಾಡುತ್ತಾರೆ’ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

‘ನಾವು ಕಳಿಸಿದ ಪಟ್ಟಿಯನ್ನು ದೆಹಲಿಯಲ್ಲಿ ಚರ್ಚೆ ಮಾಡಿ ಸಾಮಾನ್ಯ ಕಾರ್ಯಕರ್ತರಿಗೇ ನೀಡಬೇಕು ಎಂಬ ನಿರ್ಧಾರ ಮಾಡಿದರು. ನಮ್ಮ ರಾಜ್ಯ ಮಾತ್ರವಲ್ಲ ಎಲ್ಲ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಇದೇ ಮಾನದಂಡ ಅನುಸರಿಸಿದ್ದಾರೆ. ಇದನ್ನು ಸ್ವಾಗತಿಸುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.