ADVERTISEMENT

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಎಂ. ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 9:57 IST
Last Updated 8 ಜೂನ್ 2020, 9:57 IST
ರಾಜ್ಯಸಭೆ ಚುನಾವಣೆ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ನಾಮಪತ್ರ ಸಲ್ಲಿಸಿದರು. ಶಾಮನೂರು ಶಿವಶಂಕರಪ್ಪ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಇತರರು ಇದ್ದಾರೆ.
ರಾಜ್ಯಸಭೆ ಚುನಾವಣೆ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ನಾಮಪತ್ರ ಸಲ್ಲಿಸಿದರು. ಶಾಮನೂರು ಶಿವಶಂಕರಪ್ಪ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಇತರರು ಇದ್ದಾರೆ.   

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಇಲ್ಲಿ ಇಂದು ನಾಮಪತ್ರ ಸಲ್ಲಿಸಿದರು‌

ರಾಜ್ಯ ವಿಧಾನ ಸಭೆಯಲ್ಲಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್.ವಿ. ದೇಶಪಾಂಡೆ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

ಬೆಳಗ್ಗೆಯಷ್ಟೇ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.