ADVERTISEMENT

ರಾಜ್ಯಸಭೆ ಚುನಾವಣೆ ಗೆಲುವು ಅಭಿವೃದ್ಧಿ ರಾಜಕಾರಣದ ಪ್ರತಿಬಿಂಬ: ಬಿಜೆಪಿ ಬಣ್ಣನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 6:07 IST
Last Updated 11 ಜೂನ್ 2022, 6:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯಸಭೆಗೆ ಕರ್ನಾಟಕದಿಂದ ನಡೆದ ಚುನಾವಣೆಯಲ್ಲಿ ಪಕ್ಷದ ಎಲ್ಲ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.

‘ನಮ್ಮ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಅಭಿವೃದ್ಧಿ ರಾಜಕಾರಣದ ಪ್ರತಿಬಿಂಬವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಮತದಾರರು ಅಗಾಧವಾಗಿ ನಮ್ಮ ಪರ ಮತ ಚಲಾಯಿಸಲಿದ್ದಾರೆ ಎಂಬುದನ್ನು ಈ ಗೆಲುವು ಸೂಚಿಸುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್ ಮಾಡಿದೆ.

ರಾಜ್ಯಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಲಹರ್ ಸಿಂಗ್‌ ವಿಜಯ ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.