ಬೆಳಗಾವಿ: ‘ರಾಜ್ಯಸಭಾ ಸದಸ್ಯ ಸ್ಥಾನದ ಬಿಜೆಪಿ ಅಭ್ಯರ್ಥಿ ವಿಷಯದಲ್ಲಿ ನನ್ನ ಅನಿಸಿಕೆಯನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಅದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಪಕ್ಷ ನಿರ್ಧರಿಸುವ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ' ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಇಲ್ಲಿ ಶುಕ್ರವಾರ ಪ್ರತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಾಸಕ ಉಮೇಶ್ ಕತ್ತಿ ಬಂಡಾಯ ಮಾಡಿಲ್ಲ. ಶಾಸಕರಿಗೆ ಊಟ ಮಾಡಿಸಿದ್ದಾರೆ. ಲಾಕ್‌ಡೌನ್‌ನಿಂದ ಹೋಟೆಲ್‌ಗಳು ಬಂದ್ ಇವೆ. ಹೀಗಾಗಿ ಮನೆಯಲ್ಲೇ ಊಟ ಮಾಡಿದ್ದಾರೆ. ನಾನೂ ಮನೆಯಲ್ಲೇ ಕಾರ್ಯಕ್ರಮ ಇಟ್ಟುಕೊಂಡಿದ್ದೆ’ ಎಂದರು.
‘ಬಿಜೆಪಿ ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ದೊಡ್ಡ ನಾಯಕರು. ಅವರ ಬಗ್ಗೆ ಗೌರವವಿದೆ. ಆದರೆ, ಅವರ ಕಣ್ಣು ಹಳದಿಯಾಗಿದೆ. ಅದರಲ್ಲೇ ನೋಡಲಿ ಬಿಡಿ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.