ADVERTISEMENT

ರಾಜ್ಯೋತ್ಸವ ಪ್ರಶಸ್ತಿ: ವಯೋಮಿತಿ ಬದಲಾವಣೆ ಮಾಡಬೇಕು– ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 19:54 IST
Last Updated 1 ನವೆಂಬರ್ 2022, 19:54 IST
   

ಬೆಂಗಳೂರು: ‘ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷದ ವಯೋಮಿತಿ ನಿಗದಿ ಪಡಿಸಿರುವುದು ಸರಿಯಾದ ಕ್ರಮವಲ್ಲ. ಈ ನಿಯಮ ಬದಲಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ವಿವಿಧ ಕ್ಷೇತ್ರದ 67 ಸಾಧಕರು ಹಾಗೂ 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವುದಕ್ಕೂ ಮೊದಲು ಅವರು ಮಾತನಾಡಿದರು.

‘ಚಿಕ್ಕ ವಯಸ್ಸಿನಲ್ಲಿ ಸಾಧಿಸಿದ್ದರೂ 60 ವರ್ಷದ ತನಕ ರಾಜ್ಯೋತ್ಸವ ಪ್ರಶಸ್ತಿಗೆ ಕಾಯಬೇಕಿದೆ. ಸಣ್ಣ ವಯಸ್ಸಿನಲ್ಲಿಯೇ ಸಾಧಕರನ್ನು ಗುರುತಿಸಿದರೆ ಇತರರಿಗೂ ಪ್ರೇರಣೆ ಆಗಲಿದೆ. ವಯಸ್ಸಿನ ಮಿತಿ ಹೇರಿ ಸರ್ಕಾರ ತಪ್ಪು ಮಾಡಿತ್ತು’ ಎಂದರು.

ADVERTISEMENT

‘ತಮ್ಮಷ್ಟಕ್ಕೆ ಸಾಧನೆ ಮಾಡಿದ್ದವರನ್ನು ಈ ವರ್ಷ ಗುರುತಿಸಿದ್ದೇವೆ. ಹೀಗಾಗಿ ಪ್ರಶಸ್ತಿಯೇ ಮೆರುಗು ಹೆಚ್ಚಿಸಿಕೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.