ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಪ್ರಶ್ನಿಸಿದ ಅರ್ಜಿ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 19:00 IST
Last Updated 29 ನವೆಂಬರ್ 2019, 19:00 IST
..
..   

ಬೆಂಗಳೂರು: ಉದ್ಯಮಿಗಳಾದ ಕೆ.ಪ್ರಕಾಶ್ ಶೆಟ್ಟಿ, ವಿಜಯ ಸಂಕೇಶ್ವರ ಮತ್ತು ಪ್ರಭಾತ್ ಆರ್ಟ್ಸ್ ಇಂಟರ್‌ ನ್ಯಾಷನಲ್ ಸಂಸ್ಥೆಗೆ 2019ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ಈ ಕುರಿತಂತೆ ಬೆಂಗಳೂರಿನ ವಿಜಯನಗರದ ಕೇಶವ ಗೋಪಾಲ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಜಯ ಕುಮಾರ್ ಪಾಟೀಲ್ ವಾದ ಮಂಡಿಸಿ, ‘ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯ ತೀರ್ಮಾನದಂತೆಯೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ’ ಎಂದು ವಿವರಿಸಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ನಿಮಗೆ ಏನಾದರೂ ಆಕ್ಷೇಪಣೆ ಇದ್ದರೆ, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ತಮ್ಮ ಮನವಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು’ ಎಂದು ಅರ್ಜಿದಾರರಿಗೆ ಸೂಚಿಸಿ ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.