
ಬೆಂಗಳೂರು: 2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಬುಧವಾರ (ಅ.29) ಮತ್ತೆ ಸಭೆ ನಡೆಯಲಿದೆ.
ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ನೀಡಿದ್ದ ಪಟ್ಟಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಆಯ್ಕೆ ಸಮಿತಿಯ ಸಭೆ ಮಂಗಳವಾರ ನಡೆಯಿತು.
‘ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗೆ 1:2 ಅನುಪಾತದಲ್ಲಿ ಅರ್ಹರ ಹೆಸರನ್ನು ಸಲಹಾ ಸಮಿತಿ ಶಿಫಾರಸು ಮಾಡಿದೆ. ಕೆಲವು ವಿಭಾಗಳಲ್ಲಿ 1:3 ಅನುಪಾತದಲ್ಲಿಯೂ ಹೆಸರುಗಳಿವೆ. ಈ ಎಲ್ಲ ಹೆಸರುಗಳ ಬಗ್ಗೆ ಸಭೆಯಲ್ಲಿ ಪ್ರಾಥಮಿಕ ಚರ್ಚೆ ನಡೆಯಿತು. ಪ್ರಶಸ್ತಿಗೆ 70 ಮಂದಿ ಅರ್ಹರನ್ನು ಆಯ್ಕೆ ಮಾಡಬೇಕಿದೆ. ಮುಖ್ಯಮಂತ್ರಿಯ ನೇತೃತ್ವದಲ್ಲಿ ಬುಧವಾರ ಸಂಜೆ ಮತ್ತೊಮ್ಮೆ ಸಭೆ ಸೇರಿ ಪಟ್ಟಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಎಚ್.ಸಿ. ಮಹದೇವಪ್ಪ, ಶಿವರಾಜ ತಂಗಡಗಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.