ADVERTISEMENT

ರಕ್ಷಾ ರಾಮಯ್ಯ ಅಧಿಕಾರ ಸ್ವೀಕಾರ ಇಂದು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 19:07 IST
Last Updated 12 ಆಗಸ್ಟ್ 2021, 19:07 IST

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಎಂ.ಎಸ್‌. ರಕ್ಷಾ ರಾಮಯ್ಯ ಅವರು ಶುಕ್ರವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌. ಆರ್‌. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇತ್ತೀಚೆಗೆ ನಡೆದ ಚುನಾವಣೆ
ಯಲ್ಲಿ ರಕ್ಷಾ ರಾಮಯ್ಯ ಮತ್ತು ಮೊಹ್ಮದ್‌ ನಲಪಾಡ್‌ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಚುನಾವಣೆಯಲ್ಲಿ ನಲಪಾಡ್‌ ಹೆಚ್ಚು ಮತಗಳನ್ನು ಗಳಿಸಿದ್ದರೂ, ಅವರ ಮೇಲೆ ಹಲವು ಅಪರಾಧ ಪ್ರಕರಣಗಳಿರುವುದರಿಂದ ರಕ್ಷಾ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಗಿತ್ತು. ಈ ಮಧ್ಯೆ, ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಕ್ಷದ ಹಿರಿಯ ನಾಯಕರಿಗೆ ರಕ್ಷಾ ದೂರು ನೀಡಿದ್ದರು. ಇತ್ತೀಚೆಗೆ ನಡೆದ ‘ಸಂಧಾನ’ ದಂತೆ ಮುಂದಿನ ಫೆಬ್ರುವರಿಯವರೆಗೆ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಮುಂದು
ವರಿಯಲಿದ್ದು, ಬಳಿಕ ಸ್ಥಾನವನ್ನು ನಲಪಾಡ್ ಅವರಿಗೆ ಬಿಟ್ಟು ಕೊಡಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.