ADVERTISEMENT

ಲೇಖಕ ಡಾ. ರಾಮಚಂದ್ರ ಗುಹಾ ಅವರಿಗೆ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ'

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 14:33 IST
Last Updated 2 ಅಕ್ಟೋಬರ್ 2025, 14:33 IST
   

ಬೆಂಗಳೂರು: ಇತಿಹಾಸಕಾರ ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ’ಕ್ಕೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿದೆ.

ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಗುಹಾ ಆವರು ಮಹತ್ವದ ಪಾತ್ರವಹಿಸಿದ್ದಾರೆ. ಆದ್ದರಿಂದ ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.

ADVERTISEMENT

ಗುಹಾ ಅವರು ಗಾಂಧಿ ಚಿಂತನೆಗಳು, ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಮತ್ತು ಕ್ರಿಕೆಟ್‌ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.