ರಾಮನಗರ: ದುಷ್ಕರ್ಮಿಗಳು ಸುಮಾರು 300 ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ರಾಜಣ್ಣ 6 ಎಕರೆ ಅಡಿಕೆ ತೋಟದ ನಡುವೆ ಬಾಳೆಯನ್ನು ಬೆಳೆದಿದ್ದರು. ಬಾಳೆ ಗೊನೆಗಳು ಕಟಾವು ಮಾಡುವ ಹಂತಕ್ಕೆ ಬಂದಿದ್ದವು. ಇಷ್ಟರಲ್ಲಿ ಈ ಘಟನೆ ನಡೆದಿದೆ.
ತೋಟದ ಒಂದು ಭಾಗದಲ್ಲಿ 300ಕ್ಕೂ ಅಧಿಕ ಗಿಡಗಳನ್ನು ನಾಶ ಪಡಿಸಿ ಪರಾರಿಯಾಗಿದ್ದು, ಬೆಳಿಗ್ಗೆ ತೋಟಕ್ಕೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿತು ಎಂದು ರಾಜಣ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.