ADVERTISEMENT

ವರ್ಗಾವಣೆ ದಂಧೆಯಲ್ಲಿ‌ ಅನಿತಾ ಕುಮಾರಸ್ವಾಮಿ ಭಾಗಿ: ಯೋಗೇಶ್ವರ್ ಆರೋಪ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 7:40 IST
Last Updated 26 ಅಕ್ಟೋಬರ್ 2018, 7:40 IST
   

ರಾಮನಗರ: ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಆರೋಪಿಸಿದರು.

ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್‌ಗಳ ಸಹಿತ ಪ್ರಮುಖ ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ಹಣ ಎಂದು ನಿಗದಿಯಾಗಿದೆ. ಇದೆಲ್ಲ ಅನಿತಾ ಅಣತಿಯಂತೆ ನಡೆಯುತ್ತಿದೆ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ರಾಮನಗರದಲ್ಲಿ ದೇವೇಗೌಡರ ಕುಟುಂಬದವರ ರಾಜಕಾರಣಕ್ಕೆ ಜನ ಬೇಸತ್ತಿದ್ದು, ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದರು.

ADVERTISEMENT

ಅನಿತಾ ಗೆಲುವಿಗೆ ಕನಕಪುರ ಸಹೋದರರು ಟೊಂಕ ಕಟ್ಟಿ ‌ನಿಂತಿದ್ದಾರೆ. ಸ್ವಾರ್ಥ, ಅಧಿಕಾರಕ್ಕಾಗಿ ಜೆಡಿಎಸ್ ಎದುರು ಮಂಡಿಯೂರಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ‘ಅವರು ಈಗ ಮುಖಂಡರಾಗಿ‌ ಉಳಿದಿಲ್ಲ. ವ್ಯಂಗ್ಯ ಭಾಷಣಕಾರರಾಗಿ‌ ಬದಲಾಗಿದ್ದಾರೆ. ಅವರ ಮಾನಸಿಕ ಆರೋಗ್ಯವನ್ನು ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಒಳಿತು’ ಎಂದರು.

ಪ್ರಚಾರ: ಬಿಜೆಪಿ ಅಭ್ಯರ್ಥಿ ಎಲ್.‌ ಚಂದ್ರಶೇಖರ್ ಪರವಾಗಿ ಕೇಂದ್ರ ಸಚಿವ ಡಿ.ವಿ.‌ ಸದಾನಂದ ಗೌಡ ಮತಯಾಚನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.