ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.
ಅಭ್ಯರ್ಥಿ ಆಯ್ಕೆ ಸಂಬಂಧ ಬುಧವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಭೆ ಕರೆದಿದ್ದರು. ಸಭೆಯಲ್ಲಿ ಅನಿತಾ ಅವರ ಆಯ್ಕೆಯನ್ನು ದೇವೇಗೌಡ ಪ್ರಕಟಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದರು. ಬಳಿಕ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಇಲ್ಲಿ ಜೆಡಿಎಸ್‌ಗೆ ಬೆಂಬಲ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.