ADVERTISEMENT

ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:35 IST
Last Updated 14 ಮಾರ್ಚ್ 2024, 15:35 IST
ರಮೇಶ್‌ ಬಾಬು
ರಮೇಶ್‌ ಬಾಬು   

ಬೆಂಗಳೂರು: ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರನ್ನು ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಮೇಶ್ ಬಾಬು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಅವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಅವರ ನೇಮಕ ಸಂಬಂಧ ತಕ್ಷಣ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ಬಿ.ಆರ್‌. ನಾಯ್ಡು ನೇಮಕ: ಕಾಂಗ್ರೆಸ್‌ ಮುಖಂಡ ಬಿ.ಆರ್‌. ನಾಯ್ಡು ಅವರನ್ನು ಬಾಲ ಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನಾಯ್ಡು ಅವರು ಈ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲ ತಾಣದಲ್ಲಿ ಕೆಲಸ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.