ADVERTISEMENT

ಡಿ.ಕೆ.ಶಿವಕುಮಾರ್ ಷೋ ನಿಲ್ಲಿಸಲಿ: ಸಚಿವ ರಮೇಶ್‌ ಜಾರಕಿಹೊಳಿ ಟೀಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2018, 17:14 IST
Last Updated 21 ಅಕ್ಟೋಬರ್ 2018, 17:14 IST

ಕೂಡ್ಲಿಗಿ: ‘ಸಚಿವ ಡಿ.ಕೆ.ಶಿವಕುಮಾರ್‌ ಷೋ ಮಾಡೋದು ಬಿಟ್ಟು ಕೆಲಸ ಮಾಡುವುದು ಒಳ್ಳೆಯದು’ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಕಾರ್ಯಕರ್ತರ ಸಭೆ ಬಳಿಕ ಅವರನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೀರಶೈವ ಲಿಂಗಾಯತ ಧರ್ಮದ ಕುರಿತು ಶಿವಕುಮಾರ್‌ ಅವರಿಗೆ ಆಕ್ಷೇಪಣೆಗಳಿದ್ದರೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸ
ಬೇಕಿತ್ತು. ಬಹಿರಂಗ ಹೇಳಿಕೆ ಕೊಡಬೇಕಾಗಿರಲಿಲ್ಲ’ ಎಂದರು.

‘ಅವರ ಅನುಯಾಯಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಶಿವಕುಮಾರ್ ಎಲ್ಲಿಗೆ ಹೋಗಿದ್ದರು? ಸಚಿವ ಸಂಪುಟ ಸಭೆಯಲ್ಲಿ ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ ಮಾತ್ರ ಪರ–ವಿರೋಧ ಚರ್ಚೆ ಮಾಡಿದ್ದರು’ ಎಂದು ತಿಳಿಸಿದರು.

ADVERTISEMENT

‘ಶಾಸಕ ಎಂ.ಬಿ.ಪಾಟೀಲ ಅವರಿಗೆ ನನ್ನ ಬೆಂಬಲ ವಿದೆ. ಲೋಕಸಭೆ ಉಪ ಚುನಾವಣೆಯಲ್ಲಿ ನನಗೆ ಪಕ್ಷ ಕೂಡ್ಲಿಗಿಯ ಉಸ್ತುವಾರಿ ನೀಡಿದೆ. ಅದನ್ನು ನಿಭಾಯಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.