ADVERTISEMENT

ಬೆಳಗಾವಿ: ಡಿಕೆಶಿ ಪ್ರವಾಸ, ರಮೇಶ ಬಾಗಿನ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 10:02 IST
Last Updated 23 ಆಗಸ್ಟ್ 2020, 10:02 IST
ರಮೇಶ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್‌
ರಮೇಶ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್‌   

ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಜಿಲ್ಲೆಯ ಗೋಕಾಕ ತಾಲ್ಲೂಕು ಮೊದಲಾದ ಕಡೆಗಳಲ್ಲಿ ಆ. 24ರಂದು ಕೈಗೊಂಡಿದ್ದ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಉಸ್ತುವಾರಿಯೂ ಆಗಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆ.24ರಂದು ಸವದತ್ತಿ ತಾಲ್ಲೂಕಿನ ಮಲಪ್ರಭಾ ಜಲಾಶಯದಲ್ಲಿ ಹಮ್ಮಿಕೊಂಡಿದ್ದ ಗಂಗಾ ಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆ. 25ರಂದು ನಡೆಯಲಿರುವ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಧಾರವಾಡ ಜಿಲ್ಲೆಗಳ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಮತ್ತು ನೆರೆ ಹಾನಿ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈಚೆಗೆ, ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಕೂಡ ಕೊನೆ ಕ್ಷಣದಲ್ಲಿ ಮುಂದೂಡಿಕೆ ಆಗಿತ್ತು. ಇನ್ನೂ ನಡೆದಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.