
ಪ್ರಜಾವಾಣಿ ವಾರ್ತೆ
ಬೆಳಗಾವಿ: ಗೋಕಾಕದ ಶಾಸಕ, ಕಾಂಗ್ರೆಸ್‌ನ ರಮೇಶ ಜಾರಕಿಹೊಳಿ ತಮ್ಮ ಪುತ್ರ ಅಮರನಾಥ ಜಾರಕಿಹೊಳಿ ಅವರನ್ನು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಿರ್ದೇಶಕರಾಗಿ ಅವಿರೋಧ ಆಯ್ಕೆ ಮಾಡಿಸಿ ರಾಜ್ಯಮಟ್ಟದಲ್ಲಿ ಸ್ಥಾನಮಾನ ದೊರೆಯುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈಚೆಗೆ ನಡೆದ ಬೆಮುಲ್ ನಿರ್ದೇಶಕರ ಚುನಾವಣೆಯಲ್ಲೂ ಅವರು ಅವಿರೋಧವಾಗಿಯೇ ಆಯ್ಕೆಯಾಗಿದ್ದರು. ಇದೀಗ, ಕೆಎಂಎಫ್‌ಗೆ ಪ್ರತಿ ಜಿಲ್ಲೆಯಿಂದ ಒಬ್ಬರನ್ನು ನಿರ್ದೇಶಕರನ್ನಾಗಿ ಮಾಡುವ ಪ್ರಕ್ರಿಯೆಯಲ್ಲೂ ಅವಕಾಶ ಪಡೆದುಕೊಂಡಿದ್ದಾರೆ.
ಮಂಗಳವಾರ ನಡೆದ ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷ, ಜಾರಕಿಹೊಳಿ ಬೆಂಬಲಿಗ ವಿವೇಕರಾವ್ ಪಾಟೀಲ ಆಯ್ಕೆಯನ್ನು ಘೋಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.