ಕೊಪ್ಪಳ: ‘ಬಿ.ಎಸ್. ಯಡಿಯೂರಪ್ಪ ಅವರು ಹಳ್ಳಿಹಳ್ಳಿಗಳಲ್ಲಿ ಸುತ್ತಾಡಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ರಮೇಶ್ ಜಾರಕಿಯೊಳಿ ಯಡಿಯೂರಪ್ಪ ಅವರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಮೇಶ್ ಜಾರಕಿಯೊಳಿ ಬಾಯಿ ಹಿಡಿತದಲ್ಲಿಟ್ಟುಕೊಳ್ಳಬೇಕು. ಅವರಿಗೆ ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಲಿ. ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಬಹಿರಂಗವಾಗಿ ಮಾತನಾಡುವುದರಿಂದ ಯಡಿಯೂರಪ್ಪ ಅವರ ಲಕ್ಷಾಂತರ ಅಭಿಮಾನಿಗಳಿಗೆ ನೋವಾಗುತ್ತದೆ. ಕಾರ್ಯಕರ್ತರು ಅಸಮಾಧಾನಗೊಂಡರೆ ರಮೇಶ ಓಡಾಡುವುದೇ ಕಷ್ಟವಾಗುತ್ತದೆ’ ಎಂದರು. ಅವರ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ. ಕೆಲವೇ ದಿನಗಳಲ್ಲಿ ಪಕ್ಷದಲ್ಲಿ ಎಲ್ಲವು ಸರಿಹೋಗುತ್ತದೆ ಎಂದು ಹೇಳಿದರು.
‘ರಾಜ್ಯಾಧ್ಯಕ್ಷನಾದ ಬಳಿಕ ನಿರಂತರ ಹೋರಾಟ ಮಾಡುತ್ತಿದ್ದೇನೆ. ಅಲ್ಲೊಬ್ಬರು, ಇಲ್ಲೊಬ್ಬರು ಮನಬಂದಂತೆ ಮಾತನಾಡಿದರೆ ಅದಕ್ಕೆ ಉತ್ತರ ನೀಡುವಷ್ಟು ಸಮಯವಿಲ್ಲ. ಅನುದಾನದ ಕೊರತೆಯಿಂದ ಸದ್ಯದಲ್ಲಿಯೇ ಕಾಂಗ್ರೆಸ್ ಶಾಸಕ ಉಪವಾಸ ಮಾಡುವ ಪರಿಸ್ಥಿತಿ ಎದುರಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.