ADVERTISEMENT

ಜಾರಕಿಹೊಳಿ ಪ್ರಕರಣ: ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 20:56 IST
Last Updated 14 ಮಾರ್ಚ್ 2022, 20:56 IST
   

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪ ಕುರಿತಂತೆ ಜಾರಕಿಹೊಳಿ ದೂರು ಆಧರಿಸಿ ಸದಾಶಿವನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಇದೇ 22ಕ್ಕೆ ಮುಂದೂಡಿದೆ.

ಈ ಸಂಬಂಧ ಸಂತ್ರಸ್ತೆ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿತು.

ವಿಚಾರಣೆ ವೇಳೆ ಸಂತ್ರಸ್ತೆಯ ಪರ ವಕೀಲರು ಒಂದು ವಾರ ಕಾಲ ವಿಚಾರಣೆ ಮುಂದೂಡುವಂತೆ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.