ADVERTISEMENT

ಸಿ.ಡಿ. ಪ್ರಕರಣ ತಟಸ್ಥ: ತನಿಖೆಗೆ ನಿಯೋಜಿಸಿದ್ದ ಅಧಿಕಾರಿಗಳು ಕರ್ಫ್ಯೂ ಡ್ಯೂಟಿಗೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 21:40 IST
Last Updated 29 ಏಪ್ರಿಲ್ 2021, 21:40 IST
   

ಬೆಂಗಳೂರು: ಚರ್ಚೆಗೆ ಗ್ರಾಸವಾಗಿದ್ದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದುಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ಸದ್ಯ ತಟಸ್ಥವಾಗಿದೆ. ತನಿಖೆಗೆ ನಿಯೋಜಿಸಿದ್ದ ಎಸ್‌ಐಟಿ ಅಧಿಕಾರಿಗಳನ್ನು ಕರ್ಫ್ಯೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಂತ್ರಸ್ತೆ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ‘ಸಿ.ಡಿ. ಇಟ್ಟುಕೊಂಡು ಕೆಲವರು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ’ ಎಂದು ಆರೋಪಿಸಿ ರಮೇಶ ಜಾರಕಿಹೊಳಿ ಅವರೂ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಎರಡೂ ಪ್ರಕರಣದ ತನಿಖೆಗೆ ಬೆಂಗಳೂರು ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ಅಜ್ಞಾತ ಸ್ಥಳದಲ್ಲಿದ್ದ ಯುವತಿ ನೇರವಾಗಿ ನ್ಯಾಯಾಲಯಕ್ಕೆ ತೆರಳಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದ ಎಸ್‌ಐಟಿ, ವೈದ್ಯಕೀಯ ಪರೀಕ್ಷೆ ಹಾಗೂ ಮಹಜರು ಪೂರ್ಣಗೊಳಿಸಿತ್ತು.

ADVERTISEMENT

ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೂ ನೋಟಿಸ್ ನೀಡಿತ್ತು. ಕೊರೊನಾ ಸೋಂಕು ತಗುಲಿದೆ ಎಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡ ಬಳಿಕ ಎಸ್‌ಐಟಿ ಮತ್ತೆ ನೋಟಿಸ್‌ ನೀಡಿತ್ತು. ಆದರೆ, ಹೋಂ ಐಸೋಲೇಷನ್ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದಾರೆ. ಮತ್ತೆ ನೋಟಿಸ್‌ ನೀಡಿಲ್ಲವೆಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.