ADVERTISEMENT

ಸಿ.ಡಿ. ಪ್ರಕರಣ: ಯುವತಿ ವಿಚಾರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 7:13 IST
Last Updated 2 ಏಪ್ರಿಲ್ 2021, 7:13 IST
   

ಬೆಂಗಳೂರು: ಸಿ.ಡಿ. ಪ್ರಕರಣದ ‌ಸಂತ್ರಸ್ತೆ ಆಡುಗೋಡಿಯಲ್ಲಿರುವ ಸಿಸಿಬಿಯ ತಾಂತ್ರಿಕ ವಿಭಾಗದ ವಿಶೇಷ ವಿಚಾರಣಾ ಕೊಠಡಿಗೆ ಶುಕ್ರವಾರ ಬೆಳಿಗ್ಗೆ ಬಂದಿದ್ದು, ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

'ಕೆಲಸದ ಆಮಿಷವೊಡ್ಡಿದ್ದ ರಮೇಶ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ಆರೋಪಿಸಿ ಸಂತ್ರಸ್ತೆ ದೂರು ನೀಡಿದ್ದರು‌. ಅದರನ್ವಯ ತನಿಖೆ‌ ಮುಂದುವರಿಸಿರುವ ಅಧಿಕಾರಿಗಳು, ಪೂರಕ‌ ಮಾಹಿತಿ ಕಲೆಹಾಕುತ್ತಿದ್ದಾರೆ.

ಜ್ವರದ ಕಾರಣ ನೀಡಿ ಆರೋಪಿಯಾದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿಚಾರಣೆಗೆ ಈಗಾಗಲೇ ಗೈರಾಗಿದ್ದಾರೆ. ಆದರೆ, ಸಂತ್ರಸ್ತೆ ತಮ್ಮ ವಕೀಲರ‌ ಮೂಲಕ ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.