ADVERTISEMENT

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವರದಿ ಸಲ್ಲಿಸಲು ಅನುಮತಿ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 19:33 IST
Last Updated 27 ಸೆಪ್ಟೆಂಬರ್ 2021, 19:33 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಿದ್ಧಪಡಿಸಿರುವ ವರದಿ ಸಲ್ಲಿಸಲು ಅನುಮತಿ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಎಸ್‌ಐಟಿ ರಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಷರತ್ತುಗಳಿಗೆ ಒಳಪಟ್ಟು ಆದೇಶ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಕೋರಿದರು. ಇದಕ್ಕೆ ಆಕ್ಷೇಪ ಸಲ್ಲಿಸಿದ ಸಂತ್ರಸ್ತೆ ಪರ ವಕೀಲೆ ಇಂದಿರಾ ಜೈಸಿಂಗ್, ‘ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಅರ್ಜಿದಾರರು ಪ್ರಶ್ನಿಸಿದ್ದಾರೆ. ನ್ಯಾಯಾಲಯ ಈ ಪ್ರಕರಣ ಇತ್ಯರ್ಥಪಡಿಸುವ ತನಕ ವರದಿ ಸಲ್ಲಿಸಲು ಅನುಮತಿ ನೀಡಬಾರದು’ ಎಂದು ಕೋರಿದರು.

ADVERTISEMENT

ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಅ.7ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.