ADVERTISEMENT

ಸಿ.ಡಿ. ಪ್ರಕರಣ: ಆಡುಗೋಡಿಯತ್ತ ಯುವತಿ, ಪೊಲೀಸರಿಂದ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 12:45 IST
Last Updated 30 ಮಾರ್ಚ್ 2021, 12:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಲಯದ ಎದುರು ಹಾಜರಾಗಿ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಿರುವ ಯುವತಿ, ಇದೀಗ ಆಡುಗೋಡಿಯಲ್ಲಿರುವ ವಿಶೇಷ ವಿಚಾರಣಾ ಕೊಠಡಿಗೆ ಬಂದಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಎಸ್‌ಐಟಿ ಅಧಿಕಾರಿಗಳು, ಜಂಟಿಯಾಗಿ ಯುವತಿಯನ್ನು ವಿಚಾರಣೆಗೆ ಒಳಪಡಿಸಿ ಪ್ರಕರಣ ಸಂಬಂಧ ಹೇಳಿಕೆ ಪಡೆಯಲಿದ್ದಾರೆ.

ನ್ಯಾಯಾಲಯದ ಸೂಚನೆಯಂತೆ ಯುವತಿ ಕಾರಿನಲ್ಲಿ ಆಡುಗೋಡಿಗೆ ಬಂದಿದ್ದಾರೆ. ವಿಶೇಷ ವಿಚಾರಣಾ ಕೊಠಡಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ವಿಚಾರಣೆ ಬಳಿಕ ಯುವತಿಯನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯುವ ಸಾಧ್ಯತೆ ಇದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.