ADVERTISEMENT

ಸಿ.ಡಿ ಪ್ರಕರಣದ ವಿಚಾರಣೆಗೆ ಎಸ್‌ಐಟಿ ತಂಡ ರಚನೆ: ಕಮಲ್ ಪಂತ್

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 11:57 IST
Last Updated 12 ಮಾರ್ಚ್ 2021, 11:57 IST
ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್
ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್   

ಬೆಂಗಳೂರು: ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗಾಗಿ ಬೆಂಗಳೂರು ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೆಂದು ಮುಖರ್ಜಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳದ (ಎಸ್‌ಐಟಿ) ತಂಡ ರಚಿಸಲಾಗಿದೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಮಿಷನರ್ ಕಮಲ್ ಪಂತ್, ‘ಸಿ.ಡಿ. ಪ್ರಕರಣದ ವಿಚಾರಣೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದರು.

‘ಈಗಾಗಲೇ ಎಸ್‌ಐಟಿ ತನಿಖೆ ಆರಂಭಿಸಿದೆ. ಪ್ರಾಥಮಿಕ ಮಾಹಿತಿಯನ್ನೂ ಕಲೆ ಹಾಕುತ್ತಿದೆ. ಯಾರನ್ನಾದರೂ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದರೆ, ಎಸ್‌ಐಟಿ ತಂಡದವರೇ ನೋಟಿಸ್ ನೀಡಲಿದ್ದಾರೆ’ ಎಂದೂ ಹೇಳಿದರು.

ADVERTISEMENT

ಎಸ್‌ಐಟಿ ತಂಡದಲ್ಲಿ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್. ಅನುಚೇತ್, ಸಿಸಿಬಿಯ ಡಿಸಿಪಿ ರವಿ ಕುಮಾರ್, ಧರ್ಮೇಂದ್ರ, ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಕಬ್ಬನ್‌ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.