ADVERTISEMENT

ನೆಟ್ಟಾರು ಪತ್ನಿ ನೌಕರಿ ಕಾಯಂಗೊಳಿಸದ ಬಿಜೆಪಿ: ರಮೇಶ್ ಕಾಂಚನ್

​ಪ್ರಜಾವಾಣಿ ವಾರ್ತೆ
Published 28 ಮೇ 2023, 13:12 IST
Last Updated 28 ಮೇ 2023, 13:12 IST
ರಮೇಶ್ ಕಾಂಚನ್‌, ಉಡುಪಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ
ರಮೇಶ್ ಕಾಂಚನ್‌, ಉಡುಪಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ   

undefined

ಉಡುಪಿ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಿದ್ದ ಬಿಜೆಪಿ ಸರ್ಕಾರ ನೌಕರಿಯನ್ನು ಕಾಯಂ ಮಾಡದಿರಲು ಕಾರಣ ಏನು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಸರ್ಕಾರ ಬದಲಾದ ಬೆನ್ನಲ್ಲೇ ಹಿಂದಿನ ಸರ್ಕಾರದ ತಾತ್ಕಾಲಿಕ ನೇಮಕಾತಿಗಳನ್ನು ರದ್ದಾಗುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಅನುಕಂಪದ ಆಧಾರದಲ್ಲಿ ಗುತ್ತಿಗೆ ನೌಕರಿ ಪಡೆದಿದ್ದ ನೆಟ್ಟಾರು ಅವರ ಪತ್ನಿ ನೌಕರಿ ಕಳೆದುಕೊಂಡಿರುವುದು ಸಹಜ.

ADVERTISEMENT

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಲವು ಹಿಂದೂ ಯುವಕರ ಕೊಲೆ ನಡೆದಿತ್ತು. ಇವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ ಕನಿಷ್ಠ ಪರಿಹಾರವನ್ನೂ ನೀಡಿರಲಿಲ್ಲ. ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡಿ ಕೈ ತೊಳೆದುಕೊಂಡಿದ್ದ ಬಿಜೆಪಿ ಕಾಳಜಿಯ ನಿಜರೂಪ ಬಯಲಾಗಿದೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಸಹಿಸಲಾಗದೆ ಜನರಲ್ಲಿ ಗೊಂದಲ ಮೂಡಿಸುತ್ತಿರುವ ಬಿಜೆಪಿ ಹಿಂದೆ ನೀಡಿದ್ದ ಭರವಸೆಗಳು ಇಂದಿಗೂ ಅನುಷ್ಠಾನಕ್ಕೆ ಬಂದಿಲ್ಲ. ಈಗಷ್ಟೆ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು ತಿಳಿದಿದ್ದರೂ ಗ್ಯಾರಂಟಿ ಕಾರ್ಡಿನ ವಿರುದ್ಧ ಹೋರಾಟಕ್ಕೆ ಹೊರಟಿರುವುದು ವಿಪರ್ಯಾಸ.

ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಜನರಲ್ಲಿ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಬಿಜೆಪಿ ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ಹೋರಾಟ ಮಾಡಬೇಕಾದ ಪರಿಸ್ಥಿತಿ ಬರಬಹುದು ಎಂದು ರಮೇಶ್ ಕಾಂಚನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.