ADVERTISEMENT

ಕೆಫೆ ಸ್ಫೋಟ ಪ್ರಕರಣ | ಅಗತ್ಯಬಿದ್ದರೆ ಮಾತ್ರ ಎನ್‌ಐಎ ತನಿಖೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮಾರ್ಚ್ 2024, 13:44 IST
Last Updated 3 ಮಾರ್ಚ್ 2024, 13:44 IST

ಚಿಕ್ಕಮಗಳೂರಿನಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸ್ಫೋಟ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿಲ್ಲ. ಇದು ಗಂಭೀರವಾದ ವಿಷಯ. ಜನರ ಸುರಕ್ಷತೆ ಮುಖ್ಯ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಆರೋಪಿಗಳು ಸಿಕ್ಕಿಲ್ಲ. ಅಗತ್ಯ ಎನಿಸಿದರೆ ಮಾತ್ರ ಎನ್‌ಐಎಗೆ ವಹಿಸುವ ಬಗ್ಗೆ ಆಲೋಚನೆ ಮಾಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.