ADVERTISEMENT

ಬಿಎಸ್‌ವೈ ಜತೆ ಶ್ರೀರಾಮುಲು ಚರ್ಚೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 15:59 IST
Last Updated 31 ಮಾರ್ಚ್ 2025, 15:59 IST
ಬಿ. ಶ್ರೀರಾಮುಲು 
ಬಿ. ಶ್ರೀರಾಮುಲು    

ಬೆಂಗಳೂರು: ಕೆಲ ತಿಂಗಳ ಹಿಂದೆ ಬಿಜೆಪಿ ಪ್ರಮುಖ ನಾಯಕರ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿ.ಶ್ರೀರಾಮುಲು ಅವರು ಸೋಮವಾರ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ವಿಜಯೇಂದ್ರ ಅವರ ಜತೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಅವರು ಬಳಿಕ ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘2028ರಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಈ ಬಗ್ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಜತೆ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಮಾಡುತ್ತೇವೆ’ ಎಂದರು.

ADVERTISEMENT

‘ಪಕ್ಷ ನನ್ನ ತಾಯಿ ಇದ್ದಂತೆ ಎಂಬ ಚಿಂತನೆ ನನ್ನದು. ಕಾಂಗ್ರೆಸ್‌ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ನಿಂತ ನೀರಾಗಿವೆ’ ಎಂದು ಹೇಳಿದ ಅವರು, ‘ಯತ್ನಾಳ ಅವರ ವಿಚಾರದಲ್ಲಿ ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರಾಯಚೂರಿನಲ್ಲಿ ಐಐಟಿ ಬೇಕೆಂದು ಜನರು ಪ್ರತಿಭಟಿಸುತ್ತಿದ್ದಾರೆ. ಈ ವಿಚಾರದಲ್ಲಿ ಪಕ್ಷದ ನಾಯಕ ಶಿವನಗೌಡರ ಜೊತೆಗೂಡಿ ದೆಹಲಿಗೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.