ಚಳ್ಳಕೆರೆ: ‘ದೇಶದ ಭಯೋತ್ಪಾದಕರು ಕಾಂಗ್ರೆಸ್ ನಾಯಕರೇ ಹೊರತು ನಾವಲ್ಲ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪರ್ಸೆಂಟೇಜ್ ಸರ್ಕಾರದ ಪಿತಾಮಹರು ಕಾಂಗ್ರೆಸಿಗರು’ ಎಂದರು. ನಾವು ವಿರೋಧ ಪಕ್ಷದಲ್ಲಿದ್ದಾಗ ಕಾಂಗ್ರೆಸ್‌ನವರು ಶೇ 10ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಆರೋಪ ಮಾಡುತ್ತಿದ್ದೆವು. ಅದಕ್ಕೇಈಗ ನಮ್ಮ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.