ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಸಿಂಗನಾಳ ಗ್ರಾಮದ ನಿವಾಸಿ ಮಂಜುನಾಥ್ ಬಂಧಿತ ಆರೋಪಿ. ಈವರೆಗೆ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಪ್ರಕರಣ ದಾಖಲಾದ ಬಳಿಕ ಓಬಣ್ಣ ಮತ್ತು ಗಂಗಾಧರ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ರಾಜೇಶ್ ಮತ್ತು ಭುವನ್‍ಗೌಡ ಎಂಬವರನ್ನು ಬಂಧಿಸಲಾಗಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದ ಕಾರಣಕ್ಕೆ ರಮ್ಯಾಗೆ ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಅಶ್ಲೀಲವಾಗಿ ಸಂದೇಶ ಕಳುಹಿಸಿ, ಜೀವ ಬೆದರಿಕೆ ಹಾಕಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.