ನಟಿ ರಮ್ಯಾ– ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಘಟನೆಗಳು ಆಗಬಾರದು. ಪೊಲೀಸ್‌ನವರು ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.
‘ಈ ವಿಚಾರದಲ್ಲಿ ಅಧಿಕಾರಿಗಳಿಗೆ ನಾನು ಏನೂ ಸೂಚನೆ ಕೊಟ್ಟಿಲ್ಲ. ಪೊಲೀಸ್ ಕಮಿಷನರ್ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದೂ ಹೇಳಿದರು.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಸೋಮವಾರ ಲಿಖಿತ ದೂರು ನೀಡಿದ್ದರು.
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ವಿರುದ್ದ ನಡೆದ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್ ಈಕ್ವಾಲಿಟಿ (ಫೈರ್) ಪತ್ರ ಬರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.