ಹಾಸನ: ನಗರದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶದಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಹಲವಾರು ಸದಸ್ಯರು ಭಾಗವಹಿಸಿದ್ದಾರೆ.
ಇದಕ್ಕೂ ಮೊದಲು ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ, ಬಿಜೆಪಿಯವರು ಹತಾಶರಾಗಿದ್ದು, ಕೇಂದ್ರ ತನಿಖಾ ಸಂಸ್ಥೆಗಳು, ರಾಜ್ಯಪಾಲರ ಕಚೇರಿಯನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂವಿಧಾನ ವಿರೋಧಿಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಇದನ್ನು ನಿಮ್ಮನ್ನು ಆಳುವ ಸರ್ಕಾರವಲ್ಲ. ಜನರಿಂದ ಆಳಿಸುವ ಸರ್ಕಾರ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಕಿತ್ತೊಗೆಯುವುದಾಗಿ ಇಲ್ಲಿನ ದೇವೇಗೌಡರು ಹೇಳುತ್ತಾರೆ. ರಾಜ್ಯದ ಜನರು, ಕಾಂಗ್ರೆಸ್ ಬಗ್ಗೆ ಚಿಂತೆ ಮಾಡುವುದು ಬಿಡಿ. ನಿಮ್ಮ ಮನೆಯ ಮಕ್ಕಳನ್ನು ಸರಿಯಾಗಿ ಇಟ್ಟುಕೊಳ್ಳಿ. ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರುವವರ ಬಗ್ಗೆ ಮಾತನಾಡಿ ಎಂದರು.
ಮೈಸೂರಿನಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಿದ್ದೇವೆ. ಹಾಗಾಗಿ ಹಾಸನದಲ್ಲಿ ಸಮಾವೇಶ ಮಾಡಲು ನಿರ್ಧಾರ ಮಾಡಿದ್ದೇವೆ. ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಸೇರಿದಂತೆ ಸುತ್ತಲಿನ ಜಿಲ್ಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬಂದಿರುವುದು ಸಂತಸದ ಸಂಗತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.