ಬೆಂಗಳೂರು: ‘ಯುವಕನೊಬ್ಬನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಲಯಾಳ ಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ರಾಷ್ಟ್ರಪ್ರಶಸ್ತಿ ಪುರಸ್ಕೃತರೂ ಆದ ಕೇರಳದ ಕೋಯಿಕ್ಕೋಡ್ ಜಿಲ್ಲೆ ಕರುಮಾಲ ಗ್ರಾಮದ ಖ್ಯಾತ ಸಿನಿಮಾ ನಿರ್ದೇಶಕ ನಿರ್ಮಾಪಕ ಮತ್ತು ನಟ ರಂಜಿತ್ ಬಾಲಕೃಷ್ಣನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ರಂಜಿತ್ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.
ಪ್ರಕರಣ:
‘ಮಲಯಾಳ ಚಿತ್ರರಂಗದ ನಟ ಮಮ್ಮುಟ್ಟಿ ಅವರು ರಂಜಿತ್ ಬಾಲಕೃಷ್ಣನ್ ಅವರಿಗೆ ನನ್ನನ್ನು ಪರಿಚಯ ಮಾಡಿಕೊಟ್ಟಿದ್ದರು. ರಂಜಿತ್ ಅವರು ನನ್ನನ್ನು ಬೆಂಗಳೂರಿಗೆ ಕರೆಸಿಕೊಂಡು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿರುವ ಪ್ರತಿಷ್ಠಿತ ಪಂಚತಾರಾ ತಾಜ್ ಹೋಟೆಲ್‌ನಲ್ಲಿ 2012ರಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕೋಯಿಕ್ಕೋಡ್‌ನ ಪೊಕ್ಕುಣ್ಣು ಪ್ರದೇಶದಲ್ಲಿ ನೆಲಸಿರುವ ಸಜೀರ್ ಚೊಲಯಿಲ್ ಹೆಸರಿನ ವ್ಯಕ್ತಿ 2024ರ ಆಗಸ್ಟ್ 30ರಂದು ಕೋಯಿಕ್ಕೋಡ್ ಕಸಬಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.