ಬಸವರಾಜ ಬೊಮ್ಮಾಯಿ
ನವದೆಹಲಿ: ‘ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರನ್ಯಾರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿ. ಸಂಸ್ಥೆಗೆ ಜಮೀನು ನೀಡಿದ್ದೇವೆ. ಆ ಕಂಪನಿಯಲ್ಲಿ ರನ್ಯಾರಾವ್ ನಿರ್ದೇಶಕಿಯಾದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು, ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸು ಮಾಡುತ್ತಾರೆ. ₹500 ಕೋಟಿವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಉದ್ದಿಮೆಗಳು ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ’ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.