ADVERTISEMENT

ಮಡಿಕೇರಿ | ಅತ್ಯಾಚಾರ ಎಸಗಿ ವಿಡಿಯೊ ಹರಿಯಬಿಟ್ಟ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 17 ಮೇ 2020, 12:32 IST
Last Updated 17 ಮೇ 2020, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ತಾಲ್ಲೂಕಿನ ಗ್ರಾಮವೊಂದರಲ್ಲಿ ಸೌದೆ ತರಲು ಹೋಗಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ತಾವೂರು ಗ್ರಾಮದ ಚಿದಾನಂದ ಹಾಗೂ ಚೇತನ್‌ ಬಂಧಿತ ಆರೋಪಿಗಳು.

ಕೆಲವು ದಿನಗಳ ಹಿಂದೆ ಮನೆಗೆ ಸೌದೆ ಹೊತ್ತು ತರುವಾಗ ಮಹಿಳೆಯನ್ನು ಇಬ್ಬರು ಅಡ್ಡಗಟ್ಟಿದ್ದರು. ಚಿದಾನಂದ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಚೇತನ್‌ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದ ಎನ್ನಲಾಗಿದೆ.

ADVERTISEMENT

‘ವಿಷಯ ಬಹಿರಂಗ ಪಡಿಸದಂತೆ ಇಬ್ಬರು ಮಹಿಳೆಗೆ ಬೆದರಿಕೆ ಒಡ್ಡಿದ್ದರು. ಘಟನೆಯಿಂದ ಆ ಮಹಿಳೆ ಆಘಾತಕ್ಕೆ ಒಳಗಾಗಿದ್ದರು. ಆರೋಪಿಗಳೇ ಇತ್ತೀಚೆಗೆ ಆ ವಿಡಿಯೊ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಟ್ಟಿದ್ದು ಅದು ಕುಟುಂಬದವರ ಗಮನಕ್ಕೆ ಬಂದು ದೂರು ನೀಡಿದ್ದರು. ಬಳಿಕ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.