
ಪ್ರಜಾವಾಣಿ ವಾರ್ತೆ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ಮತ್ತೆ ಕಸ್ಟಡಿಗೆ ಪಡೆದುಕೊಂಡಿತು.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜೂನ್ 18ರ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿತು.
ಈ ಹಿಂದೆ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಹತ್ತು ದಿನ ವಿಚಾರಣೆಗೆ ಒಳಪಡಿಸಿದ್ದರು. ಜೂನ್ 10ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.