ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ ದಾಖಲಾಗಿದ್ದ ಎರಡನೇ ಅತ್ಯಾಚಾರ ಆರೋಪ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ರಾಘವೇಶ್ವರ ಭಾರತೀ ಶ್ರೀಗಳು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.
‘ತಮ್ಮ ಮಠದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವಯಸ್ಸಿನ ಬಾಲಕಿ ಪ್ರತಿಭಟಿಸಿದರೂ ಲೆಕ್ಕಿಸದೆ ಸ್ವಾಮೀಜಿ; ಆಕೆಯ ಮೇಲೆ ಬಲ ಪ್ರಯೋಗಿಸಿ ಅತ್ಯಾಚಾರ ನಡೆಸಿದ್ದಾರೆ’ ಎಂಬ ಆರೋಪವನ್ನು ಶ್ರೀಗಳು ಎದುರಿಸುತ್ತಿದ್ದರು.
ಸ್ವಾಮೀಜಿ ವಿರುದ್ಧ 2015ರ ಆಗಸ್ಟ್ 29ರಂದು ದಾಖಲಾಗಿದ್ದ ಎಫ್ಐಆರ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ, ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.
ಈ ಕುರಿತಂತೆ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸ್ವಾಮೀಜಿ ಪರ ಹೈಕೋರ್ಟ್ ವಕೀಲ ಪಿ.ಎನ್. ಮನಮೋಹನ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.