ADVERTISEMENT

ಈ ಶತಮಾನದ ನಿಜವಾದ ಕಟ್ಟಪ್ಪ ನಿಮ್ಮ ತಂದೆ: ಪ್ರಿಯಾಂಕ್‌ ಖರ್ಗೆಗೆ ಅಶೋಕ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜನವರಿ 2025, 11:41 IST
Last Updated 5 ಜನವರಿ 2025, 11:41 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆ (ಮಲ್ಲಿಕಾರ್ಜುನ ಖರ್ಗೆ) ಅವರೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಶೋಕ, 'ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ, ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್‌ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್‌ಗೆ ರಕ್ಷಣೆ ಕೊಡುತ್ತಿದ್ದಾರಲ್ಲ' ಎಂದಿದ್ದಾರೆ.

'ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ. ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ?' ಎಂದು ಅಶೋಕ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.