ADVERTISEMENT

ಇ–ಕೆವೈಸಿ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 16:50 IST
Last Updated 2 ಸೆಪ್ಟೆಂಬರ್ 2021, 16:50 IST

ಬೆಂಗಳೂರು:ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಇ–ಕೆವೈಸಿ ಅವಧಿಯನ್ನು ಇದೇ 10ರವರೆಗೆ ವಿಸ್ತರಿಸಿದೆ.‌

ಇನ್ನೂ ಇ–ಕೆವೈಸಿ ಮಾಡಿಕೊಳ್ಳದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಉಚಿತವಾಗಿ ಇ–ಕೆವೈಸಿ ಮಾಡಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಇದುವರೆಗೂ ಶೇ 66.43ರಷ್ಟು ಇ-ಕೆವೈಸಿ ಆಗಿದ್ದು ಶೇ 33.57 ಫಲಾನುಭವಿಗಳ ನೋಂದಣಿ ಬಾಕಿ ಇದೆ ಎಂದು ಹೇಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.