ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ತಿಳಿಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರತ್ನಪ್ರಭಾ ಅವರು ಕಳೆದ ವಾರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರು ಗುಲ್ಬರ್ಗಾ, ರಾಯಚೂರು, ಬೆಂಗಳೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಭೇಟಿ ವೇಳೆ ಶಾಸಕ ಸಿ.ಎಂ. ಉದಾಸಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.